ಹಲವು ಸಾಹಿತಿಗಳು, ಹೋರಾಟಗಾರರಿಗೆ ಮತ್ತೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು

Update: 2023-06-02 06:10 GMT

ಬೆಂಗಳೂರು, ಜೂ. 2: ಹಿರಿಯ ಸಾಹಿತಿಗಳು, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿದ್ದು, ಈ ಪ್ರಕರಣ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇಲ್ಲಿನ ಬಸವೇಶ್ವರನಗರದ ನಿವಾಸಿ ವೈದ್ಯೆ ಹಾಗೂ ಲೇಖಕಿ ಡಾ. ವಸುಂಧರಾ ಭೂಪತಿ ಅವರಿಗೆ ಮೇ 29ರಂದು ಬೆದರಿಕೆ ಪತ್ರದ ಬಂದಿದ್ದು, ಪತ್ರದ ಮೇಲೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಅಂಚೆ ಕಚೇರಿ ಮುದ್ರೆ ಹಾಕಲಾಗಿದೆ.

ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅವರಿಗೂ ಬೆದರಿಕೆ ಪತ್ರ ಬಂದಿದ್ದು, ದೂರು ಸಲ್ಲಿಸಿದ್ದಾರೆ. ಅದೇ ರೀತಿಯಲ್ಲಿ ಕವಿ ಕುಂ.ವೀರಭದ್ರಪ್ಪ ಅವರಿಗೂ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ. 

ದೂರಿನ ವಿವರ: 'ನಾನು ವೃತ್ತಿಯಲ್ಲಿ ವೈದ್ಯ, ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದೇನೆ. ಮಹಿಳಾ ಪರ ಹಾಗೂ ಜನಪರ ಹೋರಾಟಗಳಲ್ಲಿ ತೊಡಗಿಸಿ ಕೊಂಡಿದ್ದೇನೆ' ಎಂದು ಡಾ. ವಸುಂಧರಾ ಭೂಪತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಇಂಥ ಪತ್ರಗಳು ಬಂದಿದ್ದವು. ಈಗ ಮತ್ತೆ ಪತ್ರ ಬಂದಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

[ಲೇಖಕಿ ಡಾ. ವಸುಂಧರಾ ಭೂಪತಿ ಅವರಿಗೆ ಬಂದಿರುವ ಬೆದರಿಕೆ ಪತ್ರ]

Similar News