ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷ: ರಾಹುಲ್ ಗಾಂಧಿ

Update: 2023-06-02 07:07 GMT

ವಾಷಿಂಗ್ಟನ್ ಡಿಸಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಗುರುವಾರ ವಾಷಿಂಗ್ಟನ್ ಡಿಸಿಯ ನ್ಯಾಶನಲ್ ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರೊಂದಿಗೆ ನಡೆಸಿದ ಸಂವಾದದ ವೇಳೆ 'ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷ' ಎಂದು ಪ್ರತಿಪಾದಿಸಿದರು.

ಕೇರಳದಲ್ಲಿ ಮುಸ್ಲಿಂ ಲೀಗ್ ಜೊತೆಗಿನ ಕಾಂಗ್ರೆಸ್ ಮೈತ್ರಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ  ರಾಹುಲ್  ಗಾಂಧಿ, "ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷವಾಗಿದೆ. ಆ ಪಕ್ಷದಲ್ಲಿ  ಜಾತ್ಯತೀತವಲ್ಲದ ಯಾವುದೂ ಇಲ್ಲ. ಆ ವ್ಯಕ್ತಿ (ವರದಿಗಾರ) ಮುಸ್ಲಿಂ ಲೀಗ್ ಅನ್ನು ಅಧ್ಯಯನ ಮಾಡಿಲ್ಲ ಎಂದು ನಾನು ಭಾವಿಸುತ್ತೇನೆ’’ ಎಂದರು.

ರಾಹುಲ್ ಅವರು ಗುರುವಾರ ವಾಷಿಂಗ್ಟನ್‌ನ ನ್ಯಾಶನಲ್ ಪ್ರೆಸ್ ಕ್ಲಬ್‌ನಲ್ಲಿ ಫ್ರೀ-ವೀಲಿಂಗ್ ಸಂವಾದದಲ್ಲಿ ಪತ್ರಕರ್ತರಿಂದ ಪ್ರಶ್ನೆಗಳನ್ನು ಎದುರಿಸಿದರು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್  ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಮಿತ್ರಪಕ್ಷವಾಗಿದೆ. ಸಂಸತ್ತಿನಿಂದ ಅನರ್ಹಗೊಳ್ಳುವ ಮೊದಲು ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಯನಾಡ್ ಅನ್ನು ಪ್ರತಿನಿಧಿಸಿದ್ದರು.

ಪ್ರತಿಪಕ್ಷಗಳ ಒಗ್ಗಟ್ಟಿನ ಕುರಿತು ANI ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್ ಅವರು, ತಮ್ಮ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಾದ ನಡೆಸುತ್ತಿದೆ .  ಆ ನಿಟ್ಟಿನಲ್ಲಿ "ಸಾಕಷ್ಟು ಒಳ್ಳೆಯ ಕೆಲಸಗಳು ನಡೆಯುತ್ತಿವೆ" ಎಂದು ಹೇಳಿದರು.

Similar News