ಡಿಸಿಎಂ ಡಿ.ಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ಮತ್ತೆ ವಿಸ್ತರಿಸಿದ ಹೈಕೋರ್ಟ್

Update: 2023-06-02 15:34 GMT

ಬೆಂಗಳೂರು, ಜೂ. 2: ಘೋಷಿತ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮತ್ತೆ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಈ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ನಿರಾಳ ಸಿಕ್ಕಂತಾಗಿದೆ.

ಪ್ರಕರಣವೇನು?: ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‍ಗಳ ಅಡಿ ಸಿಬಿಐ 2020ರ ಅ.3ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‍ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆ.10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

Similar News