ಮಣಿಪುರದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂತೆಗೆತ; ಇತರ ಪ್ರದೇಶಗಳಲ್ಲಿ ಕೆಲವು ಗಂಟೆಗಳ ಕಾಲ ನಿಷೇಧಾಜ್ಞೆ ತೆರವು

Update: 2023-06-02 12:32 GMT

ಹೊಸದಿಲ್ಲಿ: ಮಣಿಪುರದ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಹಿಂಪಡೆಯಲಾಗಿದೆ. ಇತರ ಜಿಲ್ಲೆಗಳಲ್ಲಿ ಕೆಲವು ಗಂಟೆಗಳ ಕಾಲ ನಿಷೇಧಾಜ್ಞೆಗಳನ್ನು ಸಡಿಲಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ  ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಈ ಘೋಷಣೆ ಹೊರಡಿಸಲಾಗಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀತಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಮೇ 3 ರಂದು ಮಣಿಪುರದ  ಜಿಲ್ಲೆಗಳಲ್ಲಿ 'ಬುಡಕಟ್ಟು ಐಕ್ಯತಾ ಮೆರವಣಿಗೆ' ಆಯೋಜಿಸಿದ ನಂತರ ಜನಾಂಗೀಯ ಹಿಂಸಾಚಾರವು ಮೊದಲು ಭುಗಿಲೆದ್ದಿತ್ತು.

Similar News