2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’ ಯೋಜನೆ; ತೃತೀಯ ಲಿಂಗಿಗಳಿಗೂ ಅನ್ವಯ

''ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕಿದರೆ ಭತ್ಯೆ ಸ್ಥಗಿತ''

Update: 2023-06-02 12:06 GMT

ಬೆಂಗಳೂರು: 2022-23ರಲ್ಲಿ ಪದವಿ ಪಡೆದವರಿಗೆ ಮಾಸಿಕ 3000ದಂತೆ ನಿರುದ್ಯೋಗ ಭತ್ಯೆಯನ್ನು 24 ತಿಂಗಳವರೆಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಸರ್ಕಾರಿ ಅಥವಾ ಖಾಸಗಿ ಕೆಲಸ ಸಿಕ್ಕಿದರೆ ಭತ್ಯೆ ಸ್ಥಗಿತಗೊಳ್ಳುತ್ತದೆ ಎಂದು ತಿಳಿಸಿದರು. 

'ಯುವಕ, ಯುವತಿ ಹಾಗೂ ತೃತೀಯಲಿಂಗಿಗಳಿಗೂ ಅನ್ವಯವಾಗಲಿದೆ' ಎಂದರು.

Similar News