'ಉಚಿತ ವಿದ್ಯುತ್' ಸ್ವಂತ ಮನೆ ಹಾಗೂ ಬಾಡಿಗೆದಾರರಿಗೂ ಅನ್ವಯ: ಡಿಸಿಎಂ ಡಿ.ಕೆ.ಶಿವಕುಮಾರ್

''ಯೋಜನೆಗಳು ಬೇಡ ಎಂದಿದ್ದರೆ ಅದಕ್ಕೂ ಅವಕಾಶ ನೀಡಲಾಗುವುದು''

Update: 2023-06-02 13:49 GMT

ಬೆಂಗಳೂರು, ಜೂ. 2: ‘ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಅಧಿಕಾರ ಕೊಟ್ಟಿದ್ದಾರೆ. ನಾವು ಬಸವಣ್ಣ, ಕುವೆಂಪು, ಶಿಶುನಾಳ ಶರೀಫ ಹಾಗೂ ಕನಕದಾಸರ ನಾಡಿನವರು. ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಹೀಗಾಗಿಯೇ ನಾವು ನೀಡಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಸುದ್ದಿಗೋಷ್ಠಿ ಬಳಿಕ ಮಾತನಾಡಿದ ಅವರು, ‘ಜುಲೈ ತಿಂಗಳ ವಿದ್ಯುತ್ ಬಳಕೆ ಉಚಿತವಾಗಲಿದ್ದು, ಆಗಸ್ಟ್ ನಿಂದ ವಿದ್ಯುತ್ ಬಿಲ್ ಪಾವತಿಸುವಂತಿಲ್ಲ. ಸ್ವಂತ ಮನೆ ಹಾಗೂ ಬಾಡಿಗೆದಾರರಿಗೂ ಈ ಯೋಜನೆ ಅನ್ವಯವಾಗಲಿದೆ. ಯೋಜನೆ ದುರ್ಬಳಕೆ ತಡೆಯಲು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ ಅದಕ್ಕೆ ಶೇ.10ರಷ್ಟು ಸೇರಿಸಿ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

‘ಸರಕಾರಿ ನೌಕರರು ಹಾಗೂ ಇತರೆ ಸಂಘ-ಸಂಸ್ಥೆಗಳು ನಮಗೆ ಈ ಯೋಜನೆಗಳು ಬೇಡ ಎಂದು ಅನೇಕರು ಸ್ವ ಇಚ್ಛೆಯಿಂದ ನಮಗೆ ಪತ್ರ ಬರೆದಿದ್ದು, ಅದಕ್ಕೂ ಅವಕಾಶ ನೀಡಲಾಗುವುದು. ಯೋಜನೆ ಲಾಭವನ್ನು ತ್ಯಜಿಸಲು ಇಚ್ಛಿಸಿದರೆ ಅದನ್ನು ಸರಕಾರ ಸ್ಥಗಿತಗೊಳಿಸಲಿದೆ’ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ವಿವರಣೆ ನೀಡಿದರು.

Similar News