ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ: ಸವಾರ ಮೃತ್ಯು

Update: 2023-06-02 14:18 GMT

ಬೆಂಗಳೂರು, ಜೂ. 2: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕೆರೆ ಬಳಿ ನಡೆದಿದ್ದು, ಆನೇಕಲ್ ತಾಲೂಕಿನ ಸೊಪ್ಪಹಳ್ಳಿ ನಿವಾಸಿ ಮುನಿಯಪ್ಪ(60) ಮೃತ ವ್ಯಕ್ತಿಯಾಗಿದ್ದಾರೆ. 

ದ್ವಿಚಕ್ರ ವಾಹನದಲ್ಲಿ ಬರುವಾಗ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿತ್ತು. ಈ ವೇಳೆ ಗಂಭೀರ ಗಾಯಗೊಂಡಿದ್ದ ಮುನಿಯಪ್ಪನನ್ನು ಖಾಸಗಿ ಆಸ್ಪತ್ರೆ ರವಾನಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುನಿಯಪ್ಪ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

Similar News