ಉಡುಪಿ: ರಾಜ್ಯಮಟ್ಟದ ಹ್ಯಾಕಥಾನ್ ‘ಹ್ಯಾಕೋತ್ಸವ’ ಉದ್ಘಾಟನೆ

Update: 2023-06-02 14:58 GMT

ಉಡುಪಿ, ಜೂ.2: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಕಾಲೇಜಿನ ಇನ್ನೋವೇಶನ್ ಘಟಕ ಮತ್ತು ಐಎಸ್‌ಟಿಇ ಘಟಕದ ಸಹಯೋಗ ದೊಂದಿಗೆ ರಾಜ್ಯಮಟ್ಟದ 24 ಗಂಟೆಗಳ ಹ್ಯಾಕಥಾನ್ ಹ್ಯಾಕೋತ್ಸವ 2023ರ ಉದ್ಘಾಟನಾ ಸಮಾರಂಭವು ಇಂದು ಕಾಲೇಜಿನ ಆವರಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ವಿದ್ಯಾರ್ಥಿ ನಿರ್ದೇಶಕಿ ಡಾ.ಗೀತಾ ಮಯ್ಯ ಮಾತನಾಡಿ,  ಇಂತಹ ಕಾರ್ಯಕ್ರಮಗಳು ನಾಯಕತ್ವದ ಗುಣಗಳನ್ನು ಅಭಿವೃದ್ದಿ ಪಡಿಸಲು, ಟೀಮ್ ವರ್ಕ್, ಕಲಿಕೆಯ ಕೌಶಲ್ಯ ಸಾಮರ್ಥ್ಯಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇಂದಿನ ದಿನಗಳಲ್ಲಿ ನಾವೀನ್ಯತೆ ಮತ್ತು ಸಹಯೋಗದ ಕೆಲಸಗಳು ಬಹಳ ಮುಖ್ಯವಾಗಿದೆ. ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಬಹಳ ಸಹಕಾರಿ ಎಂದು ಹೇಳಿದರು.

ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಮಾತನಾಡಿದರು. ಕಾಲೇಜಿನ ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಗಣಕಯಂತ್ರ ಭಾಗದ ಮುಖ್ಯಸ್ಥೆ ಡಾ.ಸೌಮ್ಯ ಜೆ. ಭಟ್ ಮತ್ತು ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ವಿಭಾಗದ ಡಾ.ಗುರುಪ್ರಸಾದ್ ಉಪಸ್ಥಿತರಿದ್ದರು.  

Similar News