ಶಿಕ್ಷಣ, ಆರೋಗ್ಯದೊಂದಿಗೆ ಬೀಚ್, ಟೆಂಪಲ್ ಟೂರಿಸಂಗೆ ಒತ್ತು: ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಶಾಸಕರುಗಳ ಆಶಯ

Update: 2023-06-02 15:00 GMT

ಉಡುಪಿ, ಜೂ.2: ತಿಂಗಳೆ ಪ್ರತಿಷ್ಠಾನದ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮದಲ್ಲಿ ಉಡುಪಿ, ಕಾಪು, ಬೈಂದೂರು ಶಾಸಕರುಗಳು, ತಮ್ಮ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡಿ, ಬೀಚ್ ಹಾಗೂ ಟೆಂಪಲ್ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಸೌಲಭ್ಯಗಳನ್ನು ಒದಗಿಸಿ, ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸರಕಾರಿ ಇಂಜಿನಿಯರ್ ಕಾಲೇಜು ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು. ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆ ತರಬೇಕೆಂಬುದು ನನ್ನ ಕನಸು ಆಗಿದೆ ಎಂದು ಹೇಳಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಹೊರದೇಶಗಳಂತೆ ನನ್ನ ಕ್ಷೇತ್ರದಲ್ಲೂ ಬೀಚ್ ಪ್ರವಾಸೋದ್ಯ ಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಿ ಯುವಕ ರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕಾಗಿದೆ. ಅದೇ ರೀತಿ ಟೆಂಪಲ್ ಟೂರಿಸಂಗೂ ಒತ್ತು ಕೊಡಲಾಗುವುದು. ಕೈಗಾರಿಕೆಯಲ್ಲಿ ಸ್ಥಳೀಯರಿಗೆ ಶೇ.50 ರಷ್ಟು ಉದ್ಯೋಗಾವ ಕಾಶ ಕಲ್ಪಿಸುವ ಕಾನೂನು ಅನುಷ್ಠಾನಕ್ಕೆ ಬಂದರೆ ಕ್ಷೇತ್ರದ ಸಾಕಷ್ಟು ಸಮಸ್ಯೆಗಳು ಪರಿಹರಿಸಿದಂತೆ ಆಗುತ್ತದೆ ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಸಣ್ಣ ಕೈಗಾರಿಕೆ ಹಾಗೂ ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕಾ ಗಿದೆ. ಇದರಿಂದ ನಮ್ಮ ಕ್ಷೇತ್ರದ ಜನ ಹೊರರಾಜ್ಯ, ಜಿಲ್ಲೆಗಳಿಗೆ ವಲಸೆ ಹೋಗು ವುದನ್ನು ತಡೆಯಬಹುದು. ಮಲ್ಪೆ ಮಾದರಿಯಲ್ಲಿ ಕ್ಷೇತ್ರದಲ್ಲೂ ಬಂದರು ಅಭಿವೃದ್ಧಿ ಪಡಿಸಲಾಗುವುದು. ಜನತೆಗೆ ಆರೋಗ್ಯ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕಾಗಿ ಹೋರಾಟ ಮಾಡಬೇಕಾಗಿದೆ. ಮೀನು ಗಾರಿಕೆಗೆ ಪ್ರಥಮ ಆದ್ಯತೆಯೊಂದಿಗೆ ಕೃಷಿ, ಕೈಗಾರಿಕೆ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ, ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಹಿರಿಯ ಪತ್ರಕರ್ತ ಶ್ರೀರಾಜ ಗುಡಿ ಉಪಸ್ಥಿತರಿದ್ದರು. ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತ ನಾಡಿದರು. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Similar News