×
Ad

ಒಡಿಶಾದಲ್ಲಿ ರೈಲು ಅಪಘಾತ: ಹಲವರು ಮೃತಪಟ್ಟ ಶಂಕೆ; 300ಕ್ಕೇರಿದ ಗಾಯಾಳುಗಳ ಸಂಖ್ಯೆ

Update: 2023-06-02 20:52 IST

ಒಡಿಶಾ: ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ ಬಾಲಸೋರ್‌ನಲ್ಲಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದೆ. ಶುಕ್ರವಾರ ಸಂಜೆ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 300 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ndtv.com ವರದಿ ಮಾಡಿದೆ

ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. 

ಒಡಿಶಾ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಸುಧಾಂಶು ಸಾರಂಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.
 
ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ನ ನೂರಕ್ಕೂ ಹೆಚ್ಚು ಸಿಬ್ಬಂದಿ ರೈಲಿನೊಳಗೆ ಸಿಕ್ಕಿಬಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

Similar News