​ಉಡುಪಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

Update: 2023-06-02 15:33 GMT

ಉಡುಪಿ, ಜೂ.2: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ವತಿಯಿಂದ ಮುಂದಿನ ಜು.8ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್‌ಅದಾಲತ್/ ಮೆಗಾ ಲೋಕ್‌ಅದಾಲತ್‌ನ್ನು ಆಯೋಜಿಸಲಾಗಿದೆ.

ಇದರಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯ ಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಂಡುಕೊಳ್ಳಬಹು ದಾಗಿದೆ. 

ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ವೈವಾಹಿಕ ಪ್ರಕರಣಗಳು, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದಲ್ಲಿರುವ  ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಮೋಟಾರು ವಾಹನ ಪ್ರಕರಣ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ರಾಜಿಯಾ ಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. 

ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿ ಕೊಳ್ಳಲು ಇಲ್ಲಿ ಅವಕಾಶ ಕಲ್ಪಿಸಲಾಗಿದ್ದು, ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನ ಕಾರರು ಸೂಚಿಸುವ ಪರಿಹಾರ ಒಪ್ಪಿಗೆ ಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟೋಲ್ ಫ್ರೀ ಸಂಖ್ಯೆ: 1800-425-90900 ಅಥವಾ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News