ಒಡಿಶಾ ರೈಲು ದುರಂತ; ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ನಿಯೋಜನೆ

Update: 2023-06-03 08:41 GMT

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ. 

ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ತಕ್ಷಣವೇ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ. 

ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ವಕ್ತಾರ ಅನಿಲ್ ಕುಮಾರ್ ಟಿ., ಕಿರಿಯ ವೈಜ್ಞಾನಿಕ ಅಧಿಕಾರಿ ಸುನಿಲ್ ಮಾನೊ ಗವಾಸ್ಕರ್, ಕ್ಯಾಮೆರಾ ಮ್ಯಾನ್ ಸಿದ್ದಣ್ಣ ಗೌಡ ಇವರ ತಂಡ ಘಟನಾ ಸ್ಥಳಕ್ಕೆ ಹೊರಟಿದೆ ಎಂದು ತಿಳಿದು ಬಂದಿದೆ.

Full View

Similar News