ಒಡಿಶಾ ರೈಲು ದುರಂತ: ರಕ್ಷಣಾ ಕಾರ್ಯಾಚರಣೆ ಪೂರ್ಣ; ಒಡಿಶಾಕ್ಕೆ ತೆರಳಿದ ಪ್ರಧಾನಿ ಮೋದಿ

Update: 2023-06-03 08:27 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಡಿಶಾಗೆ ತೆರಳಿದ್ದು, ಅಲ್ಲಿ ಭುವನೇಶ್ವರದಿಂದ ಸುಮಾರು 170 ಕಿ.ಮೀ. ಉತ್ತರದಲ್ಲಿರುವ ಬಾಲಸೋರ್ ಜಿಲ್ಲೆಯ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಹಾಗೂ  ಕಟಕ್‌ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭೀಕರ ರೈಲು ಅಪಘಾತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪುನಃಸ್ಥಾಪನೆ ಕಾರ್ಯವನ್ನು ಆರಂಭಿಸಲಾಗಿದೆ ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಹಾಗೂ  ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಿದ್ದಾರೆ.

 ಒಡಿಶಾ ಮುಖ್ಯಮಂತ್ರಿ  ನವೀನ್ ಪಟ್ನಾಯಕ್ ಅವರು ಶನಿವಾರ ಬೆಳಿಗ್ಗೆ ಬಾಲಸೋರ್‌ಗೆ ಭೇಟಿ ನೀಡಿದರು ಹಾಗೂ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಪರಿಹಾರ ಘೋಷಣೆ

ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ. ಮೃತರ ಕುಟುಂಬಗಳಿಗೆ  10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ  2 ಲಕ್ಷ ರೂ. ಪರಿಹಾರವನ್ನೂ ಸಚಿವಾಲಯ ಘೋಷಿಸಿದೆ.

ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ  2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ.  ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ

Similar News