×
Ad

ಗಾಂಜಾ ಸೇವನೆ: ನಾಲ್ವರು ವಶಕ್ಕೆ

Update: 2023-06-03 17:24 IST

ಮಣಿಪಾಲ, ಜೂ.3: ಇಲ್ಲಿನ ವಿದ್ಯಾರತ್ನ ನಗರ ಎಂಬಲ್ಲಿ ಮೇ 28ರಂದು ರಾತ್ರಿ ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ.

ಕಾಂತೇಶ್ ವಿ.ಕಸ್ತೂರಿ(25), ಕಿರಣ್ ಪಾಟೀಲ್ ಎಸ್.ವಿ.(26), ರಾಕೇಶ್ ಗೌಳಿ(27) ಹಾಗೂ ಸುದೀಪ್ ಜೆ.(26) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ಪರೀಕ್ಷೆಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News