ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

Update: 2023-06-03 11:58 GMT

ಹೊಸದಿಲ್ಲಿ: ಒಡಿಶಾದ ಬಾಲಾಸೋರ್‌ನಲ್ಲಿ ರೈಲು ದುರಂತ ಸಂಭವಿಸಿದ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಭೇಟಿ ನೀಡಿದರು. ಕಟಕ್‌ನ ಆಸ್ಪತ್ರೆಗಳಲ್ಲಿರುವ ಗಾಯಾಳುಗಳನ್ನೂ ಅವರು ಭೇಟಿಯಾಗಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತಿತರ ಅಧಿಕಾರಿಗಳೊಂದಿಗೆ ಅಪಘಾತ ನಡೆದ ಸ್ಥಳವನ್ನು ಪ್ರಧಾನಿ ಪರಿಶೀಲಿಸಿದರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಪ್ರಧಾನಿ ನಂತರ ಬಾಲಸೋರ್‌ ಜಿಲ್ಲಾಸ್ಪತ್ರೆಗೂ ಭೇಟಿ ನೀಡಲಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ದಿಲ್ಲಿಯಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ.

ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ರೈಲ್ವೆ ಸಚಿವಾಲಯ ಈಗಾಗಲೇ ಆದೇಶಿಸಿದೆ.  ಮೃತರ ಕುಟುಂಬಗಳಿಗೆ ರೈಲ್ವೆ ಸಚಿವಾಲಯ ರೂ. 10 ಲಕ್ಷ ಪರಿಹಾರ ಹಾಗೂ ಗಂಭೀರ ಗಾಯಾಳುಗಳಿಗೆ ತಲಾ ರೂ 2 ಲಕ್ಷ ಪರಿಹಾರ ಘೋಷಿಸಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಧಾನಿ ಮೋದಿ ಪ್ರತ್ಯೇಕವಾಗಿ ಮೃತರ ಕುಟುಂಬಗಳಿಗೆ ತಲಾ ರೂ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ರೂ 50,000 ಪರಿಹಾರ ಘೋಷಿಸಿದ್ದಾರೆ.

Similar News