ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಆಗ್ರಹಿಸಿ ಮನವಿ

Update: 2023-06-03 14:12 GMT

ಕುಂದಾಪುರ, ಜೂ.3: ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾ ಪುರದ ವತಿಯಿಂದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾರಂಭವಾಗಿದ್ದು, ದೂರದ ಹಾಗೂ ಬೇರೆ ಬೇರೆ ಜಿಲ್ಲೆಯಿಂದ ವಿದ್ಯಾಭ್ಯಾಸ ಕ್ಕಾಗಿ ಕುಂದಾಪುರಕ್ಕೆ ಬರುವ ವಿದ್ಯಾರ್ಥಿ ಗಳು ವಿದ್ಯಾರ್ಥಿ ನಿಲಯವನ್ನು ನಂಬಿಕೊಂಡಿದ್ದಾರೆ. ಕಾಲೇಜು ಪ್ರಾರಂಭ ವಾಗಿದರೂ ಕೂಡ ಇನ್ನೂ ವಿದ್ಯಾರ್ಥಿ ನಿಲಯದಿಂದ ಅರ್ಜಿಗಳನ್ನು ನೀಡಿಲ್ಲ. ಇದರಿಂದ ಬೇರೆ ಜಿಲ್ಲೆ ಗಳಿಂದ ಬಂದಿರುವ ವಿದ್ಯಾರ್ಥಿಗಳಿಗೆ ವಸತಿಗಾಗಿ ದೊಡ್ಡ ಮಟ್ಟದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ದೂರಲಾಗಿದೆ.

ಅರ್ಜಿ ಬಿಡುಗಡೆ ಮಾಡಿದ್ದರು ಕೂಡ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ವಿಳಂಬವಾಗುತ್ತಿದೆ. ಹಾಸ್ಟೆಲ್ ಬಳಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರು ವುದರಿಂದ ಹಾಸ್ಟೆಲ್‌ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ವಸತಿ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿ ನಿಲಯಕ್ಕೆ ಬರುವ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿ ಅವರಿಗೆ ನ್ಯಾಯ ಒದಗಿಸಬೇಕೆಂದು ಎಬಿವಿಪಿ ತಾಲೂಕು ಸಂಚಾಲಕ ಧನುಷ್ ಪೂಜಾರಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಣಿ ಸದಸ್ಯ ವಿಘ್ನೇಶ್ ಶೆಟ್ಟಿ, ಪ್ರಮುಖರಾದ ಚೇತನ್, ಚಂದನ್, ಅಪೂರ್ವ, ನೇಹಾ, ಪ್ರಜ್ಞಾ, ಭೂಮಿಕಾ ಸಹಿತ ವಿವಿಧ ಕಾಲೇಜುಗಳ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Similar News