ಚಿಕ್ಕಮಗಳೂರು | ಶಾಸಕರ ಅಭಿನಂದನಾ ಕಾರ್ಯಕ್ರಮ ವೇಳೆ ಯುವಕನ ಹತ್ಯೆ ಪ್ರಕರಣ: 7 ಮಂದಿ ಆರೋಪಿಗಳ ಬಂಧನ

Update: 2023-06-04 11:12 GMT

ಚಿಕ್ಕಮಗಳೂರು, ಜೂ.4: ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದ ವೇಳೆ ಉಂಟಾದ ಗಲಾಟೆಯಲ್ಲಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು ಎಂದು ತಿಳಿದು ಬಂದಿದೆ. 

ಇದನ್ನೂ ಓದಿಚಿಕ್ಕಮಗಳೂರು | ತರೀಕೆರೆ ಶಾಸಕರ ಅಭಿನಂದನೆ ಕಾರ್ಯಕ್ರಮದಲ್ಲಿ ಗಲಾಟೆ, ಯುವಕನ ಹತ್ಯೆ

ಘಟನೆ ವಿವರ: ತರೀಕೆರೆ ಕಾಂಗ್ರೆಸ್ ಶಾಸಕ ಜಿ.ಎಚ್​.ಶ್ರೀನಿವಾಸ್​ ರಿಗೆ ಅವರ ಅಭಿಮಾನಿಗಳು ಶನಿವಾರ ತರೀಕೆರೆಯಲ್ಲಿ ಅಭಿನಂದನೆ ಸಮಾರಂಭವನ್ನು ಏರ್ಪಡಿಸಿದ್ದರು. ಶಾಸಕರಿಗೆ ಅಭಿನಂದನೆ ಮುಗಿದ ಬಳಿಕ ಆರ್ಕೆಸ್ಟ್ರಾ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹಾಡು ಬದಲಿಸುವ ವಿಚಾರದಲ್ಲಿ ವರುಣ್ ಮತ್ತು ಕಬಾಬ್ ಮೂರ್ತಿ ನಡುವೆ ಗಲಾಟೆ ನಡೆದಿತ್ತು ಎಂದು ಹೇಳಲಾಗಿದೆ.

ಕ್ಷುಲ್ಲಕ ವಿಚಾರದಲ್ಲಿ ಇವರಿಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ಉಂಟಾಗಿದೆ. ಆ ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್​ನ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಆರೋಪಿ ಕಬಾಬ್ ಮೂರ್ತಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ವರುಣ್ ರನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. 

Similar News