ಚನ್ನಪಟ್ಟಣ ಬಳಿ ಕಾಡಾನೆ ದಾಳಿ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ಖಂಡ್ರೆ

Update: 2023-06-04 12:07 GMT

ರಾಮನಗರ: ಇತ್ತೀಚೆಗೆ ಚನ್ನಪಟ್ಟಣ ತಾಲೂಕಿನ ವೀರೂಪಸಂದ್ರ ಬಳಿ ಮಾವಿನ ತೋಟ ಕಾಯುತ್ತಿರುವ ಸಂದರ್ಭದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವೀರಭದ್ರ ಅವರ ಕುಟುಂಬದವನ್ನು ರವಿವಾರ ಭೇಟಿ ಮಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ 15 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ವಿತರಿಸಿದರು. 

ಮೃತರ ಪತ್ನಿ ಮತ್ತು ಕುಟುಂಬದವರಿಗೆ ಬ್ಯಾಂಕ್ ಖಾತೆ ಇಲ್ಲದ ಕಾರಣ ತಕ್ಷಣವೇ ಬ್ಯಾಂಕ್ ಖಾತೆ ತೆರೆಸಿ ಆರ್.ಟಿ.ಜಿ.ಎಸ್. ಮೂಲಕ ಹಣ ಜಮಾ ಮಾಡುವಂತೆ ಸ್ಪಷ್ಟ ಸೂಚನೆ ನೀಡಿದ ಸಚಿವರು,  ಪರಿಹಾರದ ಹಣವನ್ನು ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಮತ್ತಿತರ ಒಳ್ಳೆಯ ಕೆಲಸಕ್ಕೆ ಬಳಸುವಂತೆ ಪಾಲಕರಿಗೆ ತಿಳಿಸಿದರು. 

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ವನ್ಯ ಮೃಗಗಳ ದಾಳಿಯನ್ನು ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಡಿ.ಕೆ ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ ಸೇರಿದಂತೆ ಇತರರು ಹಾಜರಿದ್ದರು.

Similar News