ಪಡುಬಿದ್ರಿ ಹೆದ್ದಾರಿ ಸಮಸ್ಯೆ: ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Update: 2023-06-04 16:31 GMT

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿಯ ಸಮಸ್ಯೆಗಳ ಬಗ್ಗೆ ಪರಿಶೀಲನೆಯನ್ನು ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಗಳ ವಿವೇಚನೆಯಂತೆ ಸಮಸ್ಯೆಗೆ ಪರಿಹಾರವನ್ನು  ಕಂಡುಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಸೂಚನೆಯನ್ನು ನೀಡಲಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ರವಿವಾರ ಪಡುಬಿದ್ರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸಮಸ್ಯೆಗಳ ಬಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಡುಬಿದ್ರಿ ಬಂಟರ ಭವನದ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನಿರ್ಮಾಣ ಗೊಂಡ ಅರೆಬರೆ ಒಳಚರಂಡಿ ಕಾಮಗಾರಿ ಮತ್ತು ಅಪಘಾತ ತಾಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಜಂಕ್ಷನ್ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು. 

ಹೆಚ್ಚುತ್ತಿರುವ ಅಪಘಾತಗಳು, ವಾಹನ ಸವಾರರು, ನಾಗರೀಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯರು  ಸಚಿವರ ಗಮನಕ್ಕೆ ತಂದಿದ್ದು, ಪರಿಹಾರವನ್ನು ಕಂಡುಕೊಳ್ಳಬೇಕಾದ ಅವಶ್ಯಕತೆ ಹಾಗೂ ಜನತೆಗೆ ಸುರಕ್ಷತೆಯನ್ನುಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಅನಿವಾರ್ಯತೆಯ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಅವರ ಗಮನಸೆಳೆದರು. 

ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನೀತಾಗುರು ರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ  ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು, ರಮಾಕಾಂತ್ ದೇವಾಡಿಗ, ಪ್ರಮುಖರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಶರತ್ ಶರ್ಮಾ ಉಪಸ್ಥಿತರಿದ್ದರು. 

Similar News