×
Ad

ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Update: 2023-06-04 22:10 IST

ಮಂಡ್ಯ, ಜೂ.4: ನಂಜನಗೂಡು ಮೂಲದ ಯುವತಿಯೊಬ್ಬರು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಬೂದನೂರು ಗ್ರಾಮದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆ ಬಳಿಗೆ ಶನಿವಾರ ಮಧ್ಯಾಹ್ನ ಯುವಕನೊಬ್ಬನೊಂದಿಗೆ ಬೈಕ್ ನಲ್ಲಿ ಬಂದಿದ್ದ ಯುವತಿ ಕೆಲಕಾಲ ಕೆರೆಯ ಸ್ನಾನಘಟ್ಟದ ಬಳಿ ಮಾತುಕತೆಯಲ್ಲಿ ತೊಡಗಿದ್ದು ಕೆಲ ಹೊತ್ತಿನ ಬಳಿಕ ಅಲ್ಲಿಂದ  ಇಬ್ಬರೂ ತೆರಳಿದ್ದರು ಎನ್ನಲಾಗಿದೆ.

ಸಂಜೆ ಯುವತಿಯ  ಬ್ಯಾಗು, ಚಪ್ಪಲಿ ಮುಂತಾದ ವಸ್ತುಗಳು ಕೆರೆ ದಡದಲ್ಲಿ ಕಂಡುಬಂದಿದ್ದು ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮಂಡ್ಯ ಮಿಮ್ಸ್ ಅಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು.

ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ತನಿಖೆ ಕೈಗೊಂಡಿದ್ದಾರೆ.

Similar News