ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭ: ಸಿಎಂ ಸಿದ್ದರಾಮಯ್ಯ

Update: 2023-06-05 09:32 GMT

ದಾವಣಗೆರೆ: ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜೂನ್ 5 ರ ಸೋಮವಾರ

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

'ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿ ಕೃಷಿ ಚಟುವಟಿಕೆ ಆರಂಭವಾಗುತ್ತಿದ್ದು, ಇದಕ್ಕೆ ಪೂರಕವಾದ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ. ರೈತರಿಗೆ ಕೃಷಿಗೆ ಪೂರಕವಾದ ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ವಿತರಣೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲು ಮತ್ತು ಆಕಸ್ಮಿಕ ಅತೀವೃಷ್ಟಿ ತಡೆಗೂ ಸಿದ್ದತೆ ಮಾಡಿಕೊಳ್ಳಲು ಸೂಚಿಸಲಾಗಿದೆ' ಎಂದು ತಿಳಿಸಿದರು.

'ಬಜೆಟ್ ತಯಾರಿಕಾ ಪೂರ್ವಭಾವಿ ಸಭೆಯನ್ನೇ ಇನ್ನೂ ನಡೆಸಿಲ್ಲ ಆದ್ದರಿಂದ ಬಜೆಟ್ ಗಾತ್ರದ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಕಳೆದ ಬಿಜೆಪಿ ಸರ್ಕಾರ ಚುನಾವಣಾ ಪೂರ್ವ ಮಂಡಿಸಿದ ಬಜೆಟ್ ಗಾತ್ರ 3.30 744 ಕೋಟಿ ರೂ ದಾಗಿತ್ತು. ಜುಲೈ 3 ಕ್ಕೆ ರಾಜ್ಯ ಬಜೆಟ್ ಅಧಿವೇಶ ಆರಂಭವಾಗಲಿದೆ ಏಳು ದಿನಗಳಕಾಲ ಬಜೆಟ್ ಕುರಿತು ಚರ್ಚೆ ನಡೆಯಲಿದೆ. ನಂತರ ಬಜೆಟ್ ಮಂಡಿಸಲಾಗುವುದು' ಎಂದರು.

''ಜಿಲ್ಲೆಗೆ ಕಾಕತಾಳೀಯ ಭೇಟಿ''

'ಕಾಕತಾಳಿಯ ಎಂಬಂತೆ ಮುಖ್ಯಮಂತ್ರಿಯಾದ ಮೇಲೆ ಪ್ರಥಮ ಜಿಲ್ಲಾ ಪ್ರವಾಸವಾಗಿ ದಾವಣಗೆರೆಗೆ ಆಗಮಿಸಿದ್ದೇನೆ' ಎಂದರು.

'ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ  ಸಚಿವ ಸಂಪುಟದಲ್ಲಿ  ಚರ್ಚೆ ಮಾಡಲಾಗುವುದು ನಂತರ ಮುಂದಿನಕ್ರಮ ಕೈಗೊಳ್ಳಲಾಗುವುದು. ಗೋಹತ್ಯೆ ಕಾಯ್ದೆ 1964 ಆಕ್ಟ್ ಪ್ರಕಾರ 12 ವರ್ಷ ತುಂಬಿದ ರಾಸುಗಳು ಮತ್ತು ವ್ಯವಸಾಯಕ್ಕೆ ಅನುಕೂಲಕ್ಕೆ ಬಾರದ ರಾಸು ಮುಕ್ತಗೊಳಿಸಲಾಗಿತ್ತು. ಇದು 1964 ಕಾನೂನು ಅವಾಗಲೆ ಆಗಿದೆ. ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ' ಎಂದರು.

Similar News