ಧಾರವಾಡ: ಸಹೋದರಿಯರಿಬ್ಬರು ಆತ್ಮಹತ್ಯೆ

Update: 2023-06-05 11:21 GMT

ಹುಬ್ಬಳ್ಳಿ: ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ರವಿವಾರ ನಡೆದಿದೆ.

ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ತಿಳಿದು ಬಂದಿದೆ. 

ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಕುಟುಂಬ ವಾಸವಾಗಿದ್ದು, ತಾಯಿ ಇಲ್ಲದ ವೇಳೆ ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. 

ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News