×
Ad

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಗಳೂರಿನ ತನಕ ವಿಸ್ತರಿಸಲು ಮನವಿ

Update: 2023-06-05 18:16 IST

ಉಡುಪಿ, ಜೂ.6: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದರು.

ಶೀಘ್ರವೇ ಗೋವಾ ಮುಂಬೈ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದ್ದಲ್ಲಿ ಈ ಉಡುಪಿ ಹಾಗೂ ಮಂಗಳೂರಿನ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ. ಅಲ್ಲದೆ ಕಾರವಾರದಿಂದ ತಿರುಪತಿಗೆ ವಂದೇ ಭಾರತ್ ರೈಲನ್ನು ಬೆಂಗಳೂರು ಮಾರ್ಗವಾಗಿ ಹೊಸದಾಗಿ ರೈಲ್ವೆ ಆರಂಭ ಮಾಡಿದ್ದಲ್ಲಿ ಕರಾವಳಿ ಜಿಲ್ಲೆಗಳ ಹೆಚ್ಚಿನ ಉದ್ಯಮಗಳಿಗೆ ಹಾಗೂ ಮೀನುಗಾರರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ  ಪ್ರಯೋಜನವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಡಿಸೆಂಬರ್ ತಿಂಗಳಿನಿಂದ ಜನವರಿ ಅಂತ್ಯದವರೆಗೆ ಉಡುಪಿ ಮಂಗಳೂರಿ ನಿಂದ ತೆರಳುವ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡುವಂತೆ ಕೂಡ ಅವರು ಮನವಿ ಮಾಡಿದ್ದಾರೆ. ಶಾಸಕರ ಮನವಿಯನ್ನು ಸ್ವೀಕರಿಸಿದ ಸಚಿವೆ ಅದನ್ನು ಕೇಂದ್ರ ರೈಲ್ವೆ ಸಚಿವರಿಗೆ ತಲುಪಿಸುವುದಾಗಿ ಮತ್ತು ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.

Similar News