ಉಪನ್ಯಾಸಕ ಹುದ್ದೆ: ಅರ್ಜಿ ಆಹ್ವಾನ
Update: 2023-06-05 20:02 IST
ಉಡುಪಿ, ಜೂ.5: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ, ಕಾರ್ಕಳ ತಾಲೂಕಿನ ಮಿಯ್ಯಾರಿ ನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿಗೆ ರಸಾಯನ ಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಬಿಎಡ್ ವಿದ್ಯಾರ್ಹತೆ ಹೊಂದಿದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದು ಳಿದ ವರ್ಗಗಳ ಇಲಾಖೆ ಉಡುಪಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.