ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

Update: 2023-06-06 06:43 GMT

ಮಂಗಳೂರು, ಜೂ.6: ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಮಂಗಳೂರಿನಿಂದ ಪುತ್ತೂರಿಗೆ  ಸ್ಥಳಾಂತರಿಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.

ಮಂಗಳೂರಿಗೆ ಮಂಗಳವಾರ ಆಗಮಿಸಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಶಾಸಕ ಅಶೋಕ್ ಕುಮಾರ್‌ರೈಈ ಸಂಬಂಧ ಮನವಿ ಸಲ್ಲಿಸಿದರು.

ಪುತ್ತೂರಿನಲ್ಲಿ ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಗೊಳಪಟ್ಟ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಎಸ್ಪಿ ಕಚೇರಿಗೆ 10 ವರ್ಷಗಳ ಹಿಂದೆಯೇ ಜಾಗವನ್ನು ಕಾಯ್ದಿರಿಸಲಾಗಿತ್ತು. ಎಸ್ಪಿ ಕಚೇರಿ ಸ್ಥಳಾಂತರಕ್ಕೆ ಮೂಲ ಸೌಕರ್ಯಗಳು ಪುತ್ತೂರಿನಲ್ಲಿದೆ. ಪುತ್ತೂರಿಗೆ ಎಸ್ಪಿ ಕಚೇರಿ ಸ್ಥಳಾಂತರಿಸುವಂತೆ ಮಾಡಿರುವ ಮನವಿಗೆ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿರುವುದಾಗಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಚುನಾವಣಾ ಸಮಯದಲ್ಲಿ ಹಾಕಿರುವ ಸಣ್ಣಪುಟ್ಟ ಕೇಸ್‌ಗಳನ್ನು ತನಿಖೆ ನಡೆಸಿ , ಹಿಂಪಡೆಯುವಂತೆ ಸಚಿವರನ್ನು ಇದೇ ಸಂದರ್ಭದಲ್ಲಿ ಆಗ್ರಹಿಸಿರುವುದಾಗಿ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

Similar News