ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಕೆ.ಎ.ಹಿದಾಯತುಲ್ಲಾ ನೇಮಕ

Update: 2023-06-06 08:27 GMT

ಬೆಂಗಳೂರು, ಜೂ.6: ಕಂದಾಯ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ಕೆ.ಎ.ಹಿದಾಯತುಲ್ಲಾ ಅವರನ್ನು ಮೇ 28ರಿಂದ ಜಾರಿಗೆ ಬರುವಂತೆ ಸಚಿವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆ ಮೇಲೆ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

Similar News