SSLC ಪೂರಕ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ತೋರಿಸಿದರೆ ಉಚಿತ ಪ್ರಯಾಣ; ಕೆಎಸ್ಸಾರ್ಟಿಸಿ

Update: 2023-06-06 14:40 GMT

ಬೆಂಗಳೂರು, ಜೂ.6: ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂ.12 ರಿಂದ 19ರವರೆಗೆ  ನಡೆಯಲಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಸಾರ್ಟಿಸಿ ನಿಗಮವು, ಎಸೆಸೆಲ್ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, ‘ಎಸೆಸೆಲ್ಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು’ ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.

Similar News