ಉಡುಪಿ ಜಿಲ್ಲಾ ಯುವ ಉತ್ಸವ ಮುಂದೂಡಿಕೆ

Update: 2023-06-06 14:54 GMT

ಉಡುಪಿ: ಕೇಂದ್ರ ಸರಕಾರದ ನೆಹರು ಯುವ ಕೇಂದ್ರಉಡುಪಿ ಜಿಲ್ಲೆ ಇವರ ವತಿಯಿಂದ ಜೂನ್ 8ರಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಯುವ ಉತ್ಸವವನ್ನು ಕಾರಣಾಂತರ ಗಳಿಂದ ಮುಂದೂಡಲಾಗಿದ್ದು, ಜೂನ್ 14ರಂದು ನಡೆಯಲಿದೆ.

ಕಾರ್ಯಕ್ರಮದಲ್ಲಿ 15ರಿಂದ 29 ವರ್ಷದೊಳಗಿನ ಯುವಕ, ಯುವತಿ ಯರಿಗೆ ಚಿತ್ರಕಲೆ, ಕವನ ಬರವಣಿಗೆ, ಮೊಬೈಲ್ ಫೋಟೋಗ್ರಾಫಿ, ಸಾಂಸ್ಕೃತಿಕ ಜಾನಪದ ಗುಂಪು ನೃತ್ಯ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

https://docs.google.com/spreadsheets/d/1NfFMQa4LRvzWQWprDO2qhqQ-HlkBrjA7jSGQHZooCxo/edit?usp=sharing- ಮೂಲಕ ನೋಂದಾ ಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ, ಜಿಲ್ಲಾಡಳಿತ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820- 2574992, 8762114883, 9980530553 ಅನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News