ಉಡುಪಿ: ಗುಂಡಿಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Update: 2023-06-06 16:09 GMT

ಉಡುಪಿ, ಜೂ.6: ಜೆಸಿಐ ದೊಡ್ಡಣಗುಡ್ಡೆ ಪ್ರಕೃತಿ ಹಾಗೂ ಗುಂಡಿಬೈಲು ಹಿರಿಯ ಪ್ರಾಥಮಿಕ (ಕನ್ನಡ ಮತ್ತು ಆಂಗ್ಲ ಮಾದ್ಯಮ) ಶಾಲೆಯ ಸಹಯೋಗದಲ್ಲಿ ಗುಂಡಿಬೈಲು ಶಾಲೆಯಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಪರಿಸರ ಕಾಳಜಿಯ  ಅಗತ್ಯದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಡಾ. ವಿಜಯೇಂದ್ರ ವಸಂತ್ ಪಾಲ್ಗೊಂಡಿದ್ದರು.

ಜೆಸಿಐ ದೊಡ್ಡಣಗುಡ್ಡೆ ಪ್ರಕೃತಿಯ ಅಧ್ಯಕ್ಷ ಗಣೇಶ್ ನಾಯ್ಕ್ ವಿಶ್ವ ಪರಿಸರ ದಿನಾಚರಣೆಯ ಕೂಪನ್ ಬಿಡುಗಡೆ ಮಾಡಿದರು. ಸಂಸ್ಥಾಪಕ ಅಧ್ಯಕ್ಷರಾದ ಡಿ.ಎಂ ಎನ್. ನಾಯಕ್ ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಪೂರ್ವ ಅದ್ಯಕ್ಷ ಹಾಗೂ ನಿವೃತ್ತ ಸೈನಿಕ ಎಂ.ಕೇಶವ ಆಚಾರ್ಯ ಉಪಸ್ಥಿತರಿದ್ದರು.

ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಉಡುಪ ಹಾಗೂ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸಿದ್ದಪ್ಪ ಎಂ.ಎನ್. ಮಕ್ಕಳಿಗೆ ಪರಿಸರ ಜಾಗೃತಿಯ ಅರಿವು ಮೂಡಿಸಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಚಂದ್ರಶೇಖರ ಆಚಾರ್ಯ ಶುಭ ಹಾರೈಸಿದರು. ಉಮೇಶ್ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕಿ ಮಮತಾ ವಂದಿಸಿದರು.

Similar News