ರಿಪ್ಪನ್‌ಪೇಟೆ : ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು!

Update: 2023-06-07 08:37 GMT

ಶಿವಮೊಗ್ಗ: ಮೊಬೈಲ್ ಟಾರ್ಚ್ ಬೆಳಕಿನಲ್ಲೇ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ.

ಸ್ಥಳೀಯ ಪುರಮಠ ಎಂಬಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಗೆ ಕಳೆದ ರಾತ್ರಿ ತರಲಾಗಿತ್ತು. ಆದರೆ ರಿಪ್ಪನ್ ಪೇಟೆ ಸರಕಾರಿ ಆಸ್ಪತ್ರೆಯ ಶವಾವಗಾರದಲ್ಲಿ ವಿದ್ಯುತ್  ಸಂಪರ್ಕ ಇಲ್ಲವಾಗಿತ್ತು. ಈ ಕಾರಣಕ್ಕೆ ವೈದ್ಯರು ಮೊಬೈಲ್ ಟಾರ್ಚ್  ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದು, ಇದರ ವೀಡಿಯೊ ವೈರಲ್ ಆಗಿದೆ.

ಶವಾಗಾರದಲ್ಲಿ ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದಿರುವ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಗಲು ವೇಳೆಯಲ್ಲಿ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಯಾವುದೇ ವೈದ್ಯರು ಕರ್ತವ್ಯದಲ್ಲಿ ಇರುವುದಿಲ್ಲ. ಈ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ವೈಧ್ಯಾಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಮೇಲಾಧಿಕಾರಿಗಳ ನಿರ್ಲಕ್ಷ್ಯ ವೇ ಇದಕ್ಕೆಲ್ಲ ಕಾರಣ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Similar News