ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ

Update: 2023-06-07 12:30 GMT

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ‌ ಡಾ. ಫಾರೂಕ್‌ ಅಬ್ದುಲ್ಲಾ ಅವರು ಮುಖ್ಯಮಂತ್ರಿ ಸಿದ್ದರಾಮ್ಯ ಅವರನ್ನು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಗೃಹ ಕಚೇರಿ ಕೃಷ್ಣಾಕ್ಕೆ ಆಗಮಿಸಿದ ಫಾರೂಕ್ ಅಬ್ದುಲ್ಲಾ ಅವರಿಗೆ ಹೂಗುಚ್ಛ ನೀಡಿ ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಚಿವ ಝಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಕೆ.ಗೋವಿಂದರಾಜು ಹಾಜರಿದ್ದರು.

Similar News