ಬೈಂದೂರು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು

Update: 2023-06-07 13:00 GMT

ಬೈಂದೂರು, ಜೂ.7: ಬೈಂದೂರು ಗ್ರಾಮದ ಮಯ್ಯಾ ಎಂಬಲ್ಲಿರುವ ಮನೆಯೊಂದಕ್ಕೆ ಜೂ.3ರಿಂದ ಜೂ.6ರ ಮಧ್ಯಾವಧಿಯಲ್ಲಿ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನಲ್ಲಿರುವ ಸುಬ್ರಹ್ಮಣ್ಯ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕ್ ಮುರಿದು ಒಳನುಗ್ಗಿದ ಕಳ್ಳರು,  ಕಪಾಟಿನಲ್ಲಿದ್ದ ಎರಡು ಚಿನ್ನದ ಬಳೆ, ಒಂದು ಚಿನ್ನದ ಉಂಗುರ, ಒಂದು ಜೊತೆ ಚಿನ್ನದ ಓಲೆ ಹಾಗೂ  ಒಂದು ಬೆಳ್ಳಿಯ ದೀಪಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.

ಕಳವಾದ ಸೊತ್ತುಗಳ ಒಟ್ಟು ಮೌಲ್ಯ 1,00,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News