×
Ad

ಬೈಲೂರು ದೈವಸ್ಥಾನದ ಕಾಣಿಕೆ ಡಬ್ಬ ಕಳವು ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ

Update: 2023-06-07 18:52 IST

ಉಡುಪಿ: 76 ಬಡಗಬೆಟ್ಟು ಗ್ರಾಮದ ಬೈಲೂರು ಶ್ರೀನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳ ಕಳವು ಪ್ರಕರಣದ ಆರೋಪಿಗೆ ಉಡುಪಿ ಪ್ರಧಾನ ಸಿಜೆ ಮತ್ತು ಸಿಜೆಎಂ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿ ಜೂ.6ರಂದು ಆದೇಶ ನೀಡಿದೆ.

ಪ್ರಕಾಶ್ (40) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2022ರ ಅ.30ರಂದು ದೈವಸ್ಥಾನದ ಕಾಣಿಕೆ ಡಬ್ಬವನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಆಗಿನ ಪೊಲೀಸ್ ನಿರೀಕ್ಷಕ ವಾಸಪ್ಪ ನಾಕ್, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಆರೋಪಿ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಒಂದು ವರ್ಷ 6 ತಿಂಗಳು ಕಠಿಣ ಸಜೆ ಮತ್ತು 2000ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದಾರೆ.  

Similar News