ಶ್ರೀಮಾ ರೈಗೆ ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್

Update: 2023-06-07 14:06 GMT

ಉಡುಪಿ, ಜೂ.7: ಮಾಜಿ ಪ್ರಧಾನಿ ರಾಜೀವ್ ಗಾಂಧಿರವರ ಸ್ಮರಣಾರ್ಥ ವಾಗಿ ಕೊಡಲ್ಪಡುವ ‘ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ -2023’ಕ್ಕೆ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಭಾಜನರಾಗಿದ್ದಾರೆ.

ಪುತ್ತೂರಿನ ಬೆಳ್ಳಿಪ್ಪಾಡಿ ಕುಟುಂಬ ಟ್ರಸ್ಟ್‌ನ ಅಧ್ಯಕ್ಷ ನೇಮಿರಾಜ್ ರೈ ಮತ್ತು ನಿಟ್ಟೆಗುತ್ತು ವಿಶಾಲಿ ಎನ್. ರೈ ದಂಪತಿ ಪುತ್ರಿಯಾಗಿರುವ ಇವರು, ಮೆರೈನ್ ಇಂಜಿನಿಯರಿಂಗ್ ಕನ್ಸಲ್ಟೆನ್ಸಿ ಕಂಪನಿಯನ್ನು ಮುನ್ನಡೆಸುತ್ತಿರುವ ಆದಿತ್ಯ ರೈ  ಅವರ ಪತ್ನಿ. ಇವರಿಗೆ ಇಬ್ಬರು ಪುತ್ರರು ಇದ್ದಾರೆ.

ಮಿಸೆಸ್ ಇಂಡಿಯಾ ಗ್ಲೋಬ್ 2009 ಕಿರೀಟವನ್ನು ಮುಡಿಗೇರಿಸಿರುವ ಶ್ರೀಮಾ ಸದ್ಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಆಗಿ ಕಾರ್ಯನಿರ್ವಹಿಸು ತ್ತಿದ್ದಾರೆ. ಮುಂಬೈನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Similar News