SSLC: ಮರು ಮೌಲ್ಯಮಾಪನದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣ

Update: 2023-06-07 14:17 GMT

ಬೆಂಗಳೂರು, ಜೂ.7: ಎಸೆಸೆಲ್ಸಿ-2023ರ ಮುಖ್ಯ ಪರೀಕ್ಷೆಯನ್ನು ಬರೆದ 12,986 ವಿದ್ಯಾರ್ಥಿಗಳು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಿದ್ದರು.

ಈ ಪೈಕಿ 2,353 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,164 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

Similar News