ಎಚ್.ಡಿ.ದೇವೇಗೌಡರನ್ನು ಭೇಟಿಯಾದ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ

Update: 2023-06-07 15:47 GMT

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಬೆಂಗಳೂರಿನ ಪದ್ಮನಾಭ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಎಚ್.ಡಿ.ದೇವೇಗೌಡ, ನನ್ನ ಆತ್ಮೀಯ ಸ್ನೇಹಿತ, ಫಾರೂಕ್ ಅಬ್ದುಲ್ಲಾ ಅವರು ನನ್ನನ್ನು ನೋಡಲು ಬಂದಿದ್ದು, ಆರೋಗ್ಯವನ್ನು ವಿಚಾರಿಸಿದರು. ಜತೆಗೆ, ನಾವು ಇತ್ತೀಚಿನ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದೇವೆ. ಅದರಲ್ಲೂ ಕಾಶ್ಮೀರದಲ್ಲಿನ ಬೆಳವಣಿಗೆ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್.ಡಿ.ದೇವೇಗೌಡ, ಆರ್.ರೋಷನ್ ಬೇಗ್, ವಿಧಾನ ಪರಿಷತ್ತಿನ ಸದಸ್ಯ ಬಿ.ಎಂ.ಫಾರೂಕ್ ಸೇರಿದಂತೆ ಪ್ರಮುಖರಿದ್ದರು.

Similar News