ಮಾಜಿ ಸಿಎಂ ಬಿಎಸ್‍ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Update: 2023-06-07 17:15 GMT

ಬೆಂಗಳೂರು, ಜೂ.7: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ಬುಧವಾರ  ವಜಾ ಮಾಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದೆ. ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್‍ವೈಗೆ ಬಿಗ್ ರಿಲೀಫ್ ಸಿಕ್ಕಿದೆ. 

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೂ ತನಿಖೆ ನಡೆಸಿತ್ತು. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಧೀರ್ಘ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ವಜಾ ಮಾಡಿದೆ.
 

Similar News