ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ

Update: 2023-06-09 06:52 GMT

ಮಂಗಳೂರು: ನಿಷೇಧಿತ ಮಾದಕ ವಸ್ತು (Methylene dioxy methamphetamine) MDMA ನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಫರಂಗಿಪೇಟೆ ಅಮ್ಮೆಮಾರ್ ನಿವಾಸಿ  ಮುಹಮ್ಮದ್ ಆಶ್ರಫ್ ಯಾನೆ ಚೋಟಾ ಆಶ್ರಫ್ (43) ಮತ್ತು ಪಿಲಾರ್ ದಾರಂದಬಾಗಿಲು ನಿವಾಸಿ ದಾವೂದ್ ಫರ್ವೆಝ್(36)  ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ MDMA ಅನ್ನು ಖರೀದಿಸಿಕೊಂಡು  ಮಂಗಳೂರಿಗೆ ಬಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ನೆಹರೂ ಮೈದಾನ ಪರಿಸರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ ಒಟ್ಟು 55.5 ಗ್ರಾಂ ತೂಕದ ರೂ. 2,77,500/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂ. 3230/-, KA-19-MF-6668 ನೇ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ  ಒಟ್ಟು ಮೌಲ್ಯ ರೂ 13,06,230/-ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Similar News