ಉಡುಪಿ: ತಾ.ಪಂ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

Update: 2023-06-09 10:35 GMT


ಕಾಪು, ಜೂ.19: ಹಿರಿಯ ಕಾಂಗ್ರೆಸಿಗ, ಉಡುಪಿ ತಾಪಂ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್(67) ಇಂದು ಹೃದಯಾಘಾತದಿಂದ ನಿಧನರಾದರು.

ಉದ್ಯಾವರ ಕ್ಷೇತ್ರದಿಂದ ತಾಪಂ ಸದಸ್ಯರಾಗಿ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಉದ್ಯಾವರ ಗ್ರಾಪಂ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಉದ್ಯಾವರ ಬಿಲ್ಲವ ಮಹಾಜನ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಇವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಉದ್ಯಾವರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ಫಿಶ್ ಮಿಲ್ ವಿರೋಧಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಇವರು, ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನಲ್ಲಿ ಸಕ್ರಿಯವರಾಗಿದ್ದರು. ಇವರು ಪತ್ನಿ, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Similar News