ಕುಂದಾಪುರ: ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಸೆರೆ

Update: 2023-06-09 15:04 GMT

ಕುಂದಾಪುರ, ಜೂ.9: ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಆರೋಪಿಯನ್ನು ಬಾರಕೂರು ಮೂಲದ ವಕ್ವಾಡಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್ (35) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದಾರೆ.

Similar News