ಗಾಂಜಾ ಮಾರಾಟ: ಇಬ್ಬರ ಬಂಧನ

Update: 2023-06-09 15:16 GMT

ಕೋಟ, ಜೂ.9: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋಟ ಪೊಲೀಸರು ಜೂ.9ರಂದು ಮಣೂರು ಗ್ರಾಮದ ಸರ್ವಿಸ್ ರಸ್ತೆಯ ಬಾಳೆಬೆಟ್ಟು ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತರಿಂದ 920 ಗ್ರಾಂ ಗಾಂಜಾ ತುಂಬಿದ ಚೀಲ ಮತ್ತು 2 ಮೊಬೈಲ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ 28,000ರೂ. ಅಂದಾಜಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News