ಜೂ.14: ಲೋಕಾಯುಕ್ತದಿಂದ ಜನ ಸಂಪರ್ಕ ಸಭೆ

Update: 2023-06-09 15:25 GMT

ಉಡುಪಿ, ಜೂ.9: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜೂನ್ 14ರಂದು ಕಾರ್ಕಳ ತಾಲೂಕು ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1:30ರವರೆಗೆ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. 

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581,   ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ:0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಸಂಪರ್ಕಿಸಬಹುದು. 

ಅಥವಾ ಅರ್ಜಿದಾರರು ನಮೂನೆ 1 ಮತ್ತು 2ನ್ನು ಭರ್ತಿ ಮಾಡಿ, ಅಫಿದತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್‌ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದು. 

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News