ನಟ ಅರ್ಜುನ್ ಸರ್ಜಾ ವಿರುದ್ಧ ‘ಮೀಟೂ' ಆರೋಪ: ಶ್ರುತಿ ಹರಿಹರನ್‍ಗೆ ಕೋರ್ಟ್ ನೋಟಿಸ್

Update: 2023-06-09 15:51 GMT

ಬೆಂಗಳೂರು, ಜೂ.9: ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ಸರ್ಜಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಿ ಪೊಲೀಸರು ಬಿ ರಿಪೋರ್ಟ್ ನೀಡಿದ್ದರು. ಇದನ್ನು ಶ್ರುತಿ ಅವರು ಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. ಇದೀಗ ಅರ್ಜಿ ವಿಚಾರಣೆಯ ಬಳಿಕ ನಗರದ 8ನೆ ಎಸಿಎಂಎಂ ಕೋರ್ಟ್ ಶ್ರುತಿಗೆ ನೋಟಿಸ್ ನೀಡಿದ್ದು, ಪೊಲೀಸರಿಗೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ಸೂಚಿಸಿದೆ.

ಅರ್ಜುನ್ ಸರ್ಜಾ ವಿರುದ್ಧದ ನಟಿಯ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಈ ಹಿಂದೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಬೆಂಗಳೂರಿನ 8ನೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲಿದೆ.

2017ರಲ್ಲಿ ವಿಸ್ಮಯ ಚಿತ್ರದಲ್ಲಿ ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ಒಟ್ಟಿಗೆ ನಟಿಸಿದ್ದರು. ಚಿತ್ರೀಕರಣ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಶ್ರುತಿ ಮಾಡಿದ್ದ ಆರೋಪ ಚಿತ್ರರಂಗದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು.

Similar News