ಜೂ.12-14: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Update: 2023-06-09 15:53 GMT

ಉಡುಪಿ, ಜೂ.9: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 12ರಿಂದ 14ರವರೆಗೆ  ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 

110/33/11 ಕೆವಿ ವಿದ್ಯುತ್ ಸ್ಥಾವರ ಮಣಿಪಾಲದಲ್ಲಿ 110 ಕೆವಿ ಬಸ್‌ನ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ, ಈ ಸ್ಥಾವರದಿಂದ ಹೊರಡುವ 110ಕೆವಿ ನಿಟ್ಟೂರು, 110ಕೆವಿ ಬ್ರಹ್ಮಾವರ, 33ಕೆವಿ ಶಿರ್ವ, 33ಕೆವಿ ಕುಂಜಿಬೆಟ್ಟು 1 ಮತ್ತು 2 ಮಾರ್ಗಗಳಲ್ಲಿ, 33 ಕೆವಿ ಮಲ್ಪೆ/ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ, ಕುಂಜಿಬೆಟ್ಟು, ನಿಟ್ಟೂರು, ಮಲ್ಪೆ, ಉದ್ಯಾವರ, ಶಿರ್ವ, ಬ್ರಹ್ಮಾವರ ಹಾಗೂ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ಜೂನ್ 12ರಂದು ಅಪರಾಹ್ನ 2ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11 ಕೆವಿ ಹಾಲಾಡಿ ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಬಸ್ ಮತ್ತು ಇದಕ್ಕೆ ಸಂಬಂಧಿಸಿದ  ಉಪಕರಣ ಗಳ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110/11ಕೆವಿ ಹಾಲಾಡಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ 11ಕೆವಿ ಶಂಕರನಾರಾಯಣ, ಆವರ್ಸೆ, ಬಿದ್ಕಲ್ಕಟ್ಟೆ, ಬೆಳ್ವೆ, ವಾರಾಹಿ ಮತ್ತು ಹೈಕಾಡಿ ಮಾರ್ಗಗಳಲ್ಲಿ ಅಮಾಸೆಬೈಲು, ಕುಳುಂಜೆ, ಶಂಕರನಾರಾಯಣ, ಹಾಲಾಡಿ-76, ಮಚ್ಚಟ್ಟು, ಹಾಲಾಡಿ-28, ಹೆಂಗವಳ್ಳಿ, ಮಡಾಮಕ್ಕಿ, ಸಿದ್ದಾಪುರ, ಉಳ್ಳೂರು-74, ಕಕ್ಕುಂಜೆ, ಹೆಸ್ಕತ್ತೂರು, ಯಡಾಡಿ-ಮತ್ಯಾಡಿ, ಹಳ್ಳಾಡಿ-ಹರ್ಕಾಡಿ, ಹಾರ್ದಳ್ಳಿ-ಮಂಡಳ್ಳಿ, ಬೆಳ್ವೆ, ಮಡಾಮಕ್ಕಿ, ಅಲ್ಬಾಡಿ ಮತ್ತು ಶೇಡಿಮನೆ, ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುವುದು.

110/11 ಕೆವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಆವರ್ಸೆ, ಬಿದ್ಕಲ್ಕಟ್ಟೆ, ಬೈಲೂರು, ಬೆಳ್ವೆ ಮತ್ತು ಹೈಕಾಡಿ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬಿದ್ಕಲ್ಕಟ್ಟೆ, ಕುಳಂಜೆ, ಶಂಕರನಾರಾಯಣ, ಹಾಲಾಡಿ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ ಯಡಾಡಿ-ಮತ್ಯಾಡಿ, ರಟ್ಟಾಡಿ, ಅಮಾಸೆ ಬೈಲು, ಮಚ್ಚಟ್ಟು, ಹಳ್ಳಾಡಿ-ಹರ್ಕಾಡಿ, ಅಲ್ಬಾಡಿ, ಆರ್ಡಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ಬೆಳ್ವೆ, ಹೆಂಗ ವಳ್ಳಿ, ಮಡಾಮಕ್ಕಿ, ಕಕ್ಕುಂಜೆ, ಹಾಲಾಡಿ-76, ಹೆಸ್ಕತ್ತೂರು, ಸೂರ್ಗೋಳಿ, ಬೈಲೂರು, ಕಾಜಾಡಿ ಮತ್ತು ಕೊಂಡಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13ರಂದು ಬೆಳಗ್ಗೆ 9:30 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ  ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ, 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ 11ಕೆವಿ ಪದವು ಫೀಡರ್ ಹಾಗೂ 110/11 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ಮುಂಡ್ಕೂರು, ಬೋಳ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್‌ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆಕಟ್ಟೆ, ಬಾರೆಬೈಲು, ಕೆಂಪುಜೋರ,  ಪುಕ್ಕಲ್ಲು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 13ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33/11 ಕೆವಿ ಹೆಬ್ರಿ ಉಪದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಮುದ್ರಾಡಿ, ಚಾರ, ಕಳ್ತೂರು ಫೀಡರಿನಲ್ಲಿ ವ್ಯವಸೆ ಸುಧಾರಣಾ ಕಾಮಗಾರಿ ಹಾಗೂ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಕನ್ಯಾನ, ಚಾರ, ಹೊಸೂರು, ಕೆರೆಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 14ರಂದು ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 

Similar News