ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಆಯೋಗ ರಚನೆಗೆ ಆಗ್ರಹ; ಸಿಎಂಗೆ ಪತ್ರ ಬರೆದ ಸುಬ್ರಮಣಿಯನ್ ಸ್ವಾಮಿ
Update: 2023-06-09 23:49 IST
ಮಡಿಕೇರಿ, ಜೂ.9: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಯಂತೆ ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಕೊಡಗು ಜಿಲ್ಲೆಯ ಬುಡಕಟ್ಟು ಜನಾಂಗ ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಸರಕಾರ ಆಯೋಗವೊಂದನ್ನು ರಚಿಸಬೇಕೆಂದು ಒತ್ತಾಯಿಸಿ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಅವರು ಇದೇ ಜೂ.14 ರಂದು ಅರ್ಜಿ ವಿಚಾರಣೆಯ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಕೊಡವರ ಬೇಡಿಕೆಗಳ ಕುರಿತು ಉಲ್ಲೇಖಿಸಿರುವ ಡಾ.ಸುಬ್ರಮಣ್ಯನ್ ಸ್ವಾಮಿ ಕೊಡವರಿಗೆ ಕರ್ನಾಟಕದಲ್ಲಿ ವಿಶೇಷ ಸ್ಥಾನಮಾನ ಒದಗಿಸುವ ನಿಟ್ಟಿನಲ್ಲಿ ಸರಕಾರಿ ಆಯೋಗವೊಂದನ್ನು ರಚಿಸುವ ತುರ್ತು ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.