ಸಿಎಂ ಆದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಸಿದ್ದರಾಮಯ್ಯ

Update: 2023-06-10 10:41 GMT

ಮೈಸೂರು: ಮುಖ್ಯಮಂತ್ರಿ ಆದ ಬಳಿಕ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ್ದಾರೆ.

ಶನಿವಾರ ನಂಜನಗೂಡು ತಾಲೂಕಿನ ಸುತ್ತೂರು ಹೆಲಿಪ್ಯಾಡ್​​ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರದ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ ಮಹದೇವಪ್ಪ, ವೆಂಕಟೇಶ್, ಮಾಜಿ ಶಾಸಕ ಯತೀದ್ರ ಸಿದ್ದರಾಮಯ್ಯ ಜೊತೆಗಿದ್ದರು. 

ಕೃತಜ್ಞತಾ ಸಮಾವೇಶದಲ್ಲಿ ಭಾಗಿ: ಸಿದ್ದರಾಮಯ್ಯ ವರುಣಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆಯಲಿರುವ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯರನ್ನು ತಮ್ಮ ಕೊನೆಯ ಚುನಾವಣೆಯಲ್ಲಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಲಿದ್ದಾರೆ.

Similar News