×
Ad

ಬಸ್ಸಿನಲ್ಲಿ ಶೋಭನಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಶೋಭಾ ಕರಂದ್ಲಾಜೆ ಆಕ್ರೋಶ

Update: 2023-06-10 15:37 IST

ಚಿಕ್ಕಮಗಳೂರು: ''ರಾಜ್ಯ ಸರಕಾರ ಹೆಣ್ಣುಮಕ್ಕಳಿಗೆ ಕೊಟ್ಟಿರುವ 'ಶಕ್ತಿ' ಯೋಜನೆಯಿಂದ ಖುಷಿಯಾಗಿದೆ, ಹೆಣ್ಮಕ್ಕಳಿಗೂ ಬಸ್ಸಿನಲ್ಲಿ ಪ್ರವಾಸ ಮಾಡಬಹುದು‌, ಬೇರೆ ಕಡೆ ಹೋಗಬಹುದು. ಅದರೆ, ಶೋಭನಿಗೂ ಫ್ರೀ ಎಂಬ ದುರಹಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ'' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ  ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು'' ಎಂದು ಅಭಿಪ್ರಾಯಪಟ್ಟರು. 

''ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ. ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ  ಅನಿವಾರ್ಯತೆ ಇದೆ'' ಎಂದು ಹೇಳಿದರು. 

Full View

Similar News