ಮೆಟ್ರೋ ಕಾಮಗಾರಿ: 203 ಮರಗಳನ್ನು ಕಡಿಯಲು ಹೈಕೋರ್ಟ್ ಒಪ್ಪಿಗೆ

Update: 2023-06-10 12:19 GMT

ಬೆಂಗಳೂರು, ಜೂ. 10: ನಗರದ ದೂರವಾಣಿ ನಗರ ಗೇಟ್-ಕೆಂಪಾಪುರ ಮಾರ್ಗದ ನಿರ್ಮಾಣ ಕಾಮಗಾರಿಗಾಗಿ 203 ಮರಗಳ ತೆರವು ಹಾಗೂ 45 ಮರಗಳನ್ನು ಸ್ಥಳಾಂತರ ಮಾಡುವುದಕ್ಕೆ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. 

ಮೆಟ್ರೋ ಕಾಮಗಾರಿ ಸೇರಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಹಾಗೂ ಪರಿಸರವಾದಿ ದತ್ತಾತ್ರೇಯ ಟಿ.ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

ಮರಗಳ ತೆರವು ಹಾಗೂ ಸ್ಥಳಾಂತರಕ್ಕೆ ಬಿಎಂಆರ್‍ಸಿಎಲ್ ಹೈಕೋರ್ಟ್‍ಗೆ ಮನವಿ ಸಲ್ಲಿಸಿತ್ತು. ಈ ಮನವಿ ಪುರಸ್ಕರಿಸಿರುವ ಹೈಕೋರ್ಟ್, ಮರಗಳ ತೆರವು ಹಾಗೂ ಸ್ಥಳಾಂತರಕ್ಕೆ ಅನುಮತಿ ನೀಡಿದೆ.  

ಮೆಟ್ರೋ ಯೋಜನೆ ಅತ್ಯಂತ ದಕ್ಷ ಮತ್ತು ಪರಿಸರ ಸ್ನೇಹಿಯಾಗಿದೆ. ಯೋಜನೆಯಿಂದ ಜನರ ಪ್ರಯಾಣದ ಸಮಯ ಉಳಿಯಲಿದೆ. ಸಂಚಾರ ದಟ್ಟಣೆ ಕಡಿಮೆ ಮಾಡಲಿದ್ದು, ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲಿದೆ. ಜೊತೆಗೆ, ಆರ್ಥಿಕವಾಗಿ ಲಾಭದಾಯಕವಾಗಿದೆ. ಹೀಗಾಗಿ, ಈ ಯೋಜನೆಗಾಗಿ ಅಗತ್ಯವಿರುವ ಮರಗಳನ್ನು ತೆರವು ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. 

Similar News