ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಉಡುಪಿ ಜಿಲ್ಲೆಯಲ್ಲಿ 'ಯೆಲ್ಲೋ ಅಲರ್ಟ್'

Update: 2023-06-10 12:41 GMT

ಬೆಂಗಳೂರು, ಜೂ. 10: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಕರ್ನಾಟಕ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಮುಂಗಾರು ಮಳೆ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿ ಆದೇಶ ಹೊರಡಿಸಲಾಗಿದೆ. ಇದೀಗ ಉಡುಪಿ ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ.

ಅಲ್ಲದೆ, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ. ಬಿಪಾರ್ ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ವರುಣನ ಆರ್ಭಟ ಜೋರಾಗಿದೆ. ಮುಂಗಾರು ಮಳೆಗೂ ಮುನ್ನವೇ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Similar News