ಸರಕಾರಿ ಶಾಲೆಗೆ ಕಳಪೆ ಗುಣಮಟ್ಟದ ಬಟ್ಟೆ ಪೂರೈಕೆ ಆರೋಪ; ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲು

Update: 2023-06-10 17:15 GMT

ಬೆಂಗಳೂರು, ಜೂ. 10: ಸರಕಾರಿ ಶಾಲಾ ಮಕ್ಕಳ ಸಮವಸ್ತ್ರಕ್ಕೆ ಕಳಪೆ ಗುಣಮಟ್ಟದ ಬಟ್ಟೆ ಪೂರೈಸಿದ ಆರೋಪದಡಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ನಿರ್ಗಮಿತ ವ್ಯವಸ್ಥಾಪಕ ನಿರ್ದೇಶಕ ಎಸ್. ಮುದ್ದಯ್ಯ, ತಾಂತ್ರಿಕ ವ್ಯವಸ್ಥಾಪಕ ಬಿ.ಜಿ.ಶ್ರೀಧರ್ ಹಾಗೂ ಎಸ್ಟೇಟ್ ಆಫೀಸರ್ ಬಿ.ಲಕ್ಷ್ಮಣ್ ವಿರುದ್ಧ ಇಲ್ಲಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪೂರೈಸಲು ರಾಜ್ಯಾದ್ಯಂತ 1,34,05,729 ಮೀಟರ್ ಬಟ್ಟೆಯನ್ನು ನೀಡಲಾಗಿತ್ತು.

ಒಂದರಿಂದ 10ನೆ ತರಗತಿವರೆಗಿನ ಗಂಡು ಮಕ್ಕಳಿಗೆ ಮತ್ತು ಒಂದರಿಂದ ಏಳನೆ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಸಮವಸ್ತ್ರಕ್ಕಾಗಿ ಬಟ್ಟೆ ನೀಡಲಾಗಿತ್ತು. ಆದರೆ ಒಳ್ಳೆಯ ಗುಣಮಟ್ಟದ ಬಟ್ಟೆ ನೀಡಿಲ್ಲ. ನಿಗಮ ಪೂರೈಸಿದ ಬಟ್ಟೆಯು ಕಳಪೆ ಗುಣಮಟ್ಟದ್ದಾಗಿದ್ದು, ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಜವಳಿ ಆಯುಕ್ತರ ಸಹಾಯಕ ಶ್ರೀಧರ್ ನಾಯ್ಕ್ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Similar News